Deuteronomy 31:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:”ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
Kannada BSI Bible 2016
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.