Deuteronomy 31:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
Kannada BSI Bible 2016
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.
Kannada Bible (KNCL) BSI 2016
ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.