Deuteronomy 31:21 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
Kannada BSI Bible 2016
ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.”