Deuteronomy 31:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ:”ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.
Kannada BSI Bible 2016
ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.