Deuteronomy 31:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಕುಲಾಧಿಪತಿಗಳವರನ್ನು ಮತ್ತು ಗೋತ್ರಪ್ರಧಾನರನ್ನು ನನ್ನ ಬಳಿಗೆ ಕರೆದುತನ್ನಿರಿ; ಅವರಿಗೆ ನಾನಿದನ್ನು ತಿಳಿಸುವೆನು. ನಾನು ಆಕಾಶವನ್ನೂ ಭೂಮಿಯನ್ನೂ ಅದಕ್ಕೆ ಸಾಕ್ಷಿಯಾಗಿ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.
Kannada BSI Bible 2016
ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರೋಧವಾಗಿ ಸಾಕ್ಷಿಗಳಾಗುವದಕ್ಕೆ ಭೂಮ್ಯಾಕಾಶಗಳನ್ನು ಕರೆಯುವೆನು.
Kannada Bible (KNCL) BSI 2016
ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ, ಅವರಿಗೆ ವಿರುದ್ಧ ಸಾಕ್ಷಿಗಳಾಗುವುದಕ್ಕೆ ಭೂಮ್ಯಾಕಾಶಗಳನ್ನೇ ಕರೆಯುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ, ನಿಮ್ಮ ಅಧಿಕಾರಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ಆಗ ಈ ಮಾತುಗಳನ್ನು ಅವರು ಕೇಳುವ ಹಾಗೆ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.