Deuteronomy 31:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.
Kannada BSI Bible 2016
ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.
Kannada Bible (KNCL) BSI 2016
ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.