Deuteronomy 31:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
Kannada BSI Bible 2016
ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸೇನಾನಾಯಕನಾಗಿ ಹೊಳೆಯನ್ನು ದಾಟಿಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ಹೊಳೆಯನ್ನು ದಾಟಿಹೋಗುವನು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು.