Deuteronomy 31:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
Kannada BSI Bible 2016
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.
Kannada Bible (KNCL) BSI 2016
ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ.”