Deuteronomy 31:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.
Kannada BSI Bible 2016
ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -
Kannada Bible (KNCL) BSI 2016
ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.