Deuteronomy 32:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.
Kannada BSI Bible 2016
ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರನ್ನು ಶೂನ್ಯವೂ ಭಯಂಕರವೂ ಆಗಿರುವ ಮರಳುಕಾಡಿನಲ್ಲಿ ಕಂಡು ಪರಾಮರಿಸಿ ಪ್ರೀತಿಯಿಂದ ಆವರಿಸಿಕೊಂಡು ಕಣ್ಣುಗುಡ್ಡಿನಂತೆ ಕಾಪಾಡಿದ್ದೂ;
Kannada Bible (KNCL) BSI 2016
ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.