Deuteronomy 32:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.
Kannada BSI Bible 2016
ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲ್ಯರನ್ನು ಆತುಕೊಂಡದ್ದೂ;
Kannada Bible (KNCL) BSI 2016
ಗೂಡಿನಿಂದ ಮರಿಗಳನು ಹೊರಡಿಸಿದಾ ಗರುಡಪಕ್ಷಿ ಹಾರಾಡಿ ಅವು ಬೀಳದಂತೆ ಕಾಯುತ್ತದೆ ರೆಕ್ಕೆಗಳನು ಚಾಚಿ. ಅಂತೆಯೆ ಸರ್ವೇಶ್ವರ ಕಾಪಾಡಿದ ಇಸ್ರಯೇಲರನು ಕೈಚಾಚಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ, ಅವುಗಳ ಮೇಲೆ ರೆಕ್ಕೆಯನ್ನಾಡಿಸಿ, ತನ್ನ ರೆಕ್ಕೆಗಳನ್ನು ಚಾಚಿ, ಅವುಗಳನ್ನು ತೆಗೆದುಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ,