Deuteronomy 32:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”
Kannada BSI Bible 2016
ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಪಾನಕ್ಕಾಗಿ ದ್ರಾಕ್ಷೆಯ ರಕ್ತರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.
Kannada Bible (KNCL) BSI 2016
ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.