Deuteronomy 32:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
Kannada BSI Bible 2016
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.
Kannada Bible (KNCL) BSI 2016
“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.