Deuteronomy 32:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ. ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.
Kannada BSI Bible 2016
ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು.
Kannada Bible (KNCL) BSI 2016
ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.