Deuteronomy 32:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.
Kannada BSI Bible 2016
ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ [ತಣ್ಣಗಿರುವದು;] ನನ್ನ ಬೋಧನೆಯು ಮಂಜಿನಂತೆಯೂ ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ [ಹಿತವಾಗಿರುವದು].
Kannada Bible (KNCL) BSI 2016
ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.