Deuteronomy 32:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.
Kannada BSI Bible 2016
ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು - ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಮಾಡದವರೂ ದ್ರೋಹಿಗಳಾದ ಮಕ್ಕಳೂ ಆಗಿದ್ದಾರೆ.
Kannada Bible (KNCL) BSI 2016
ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.