Deuteronomy 32:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.
Kannada BSI Bible 2016
ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.
Kannada Bible (KNCL) BSI 2016
ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಸಿವೆಯಿಂದ ಬಳಲಿ ಹೋಗುವರು, ಜ್ವಾಲೆಯಿಂದಲೂ ಕಠಿಣ ವ್ಯಾಧಿಯಿಂದಲೂ ಬೀಳುವರು. ಕಾಡುಮೃಗಗಳನ್ನೂ ಧೂಳಿನಲ್ಲಿರುವ ವಿಷಸರ್ಪಗಳನ್ನೂ ಅವರಿಗೆ ವಿರೋಧವಾಗಿ ಕಳುಹಿಸುವೆನು.