Deuteronomy 32:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
Kannada BSI Bible 2016
ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರ ವಿರೋಧಿಗಳು ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು - ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಂಡಾರೆಂದು ನಾನು ಹಿಂದೆಗೆದೆನು ಎಂಬದೇ.
Kannada Bible (KNCL) BSI 2016
ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”