Deuteronomy 32:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರಿಸುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
Kannada BSI Bible 2016
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.
Kannada Bible (KNCL) BSI 2016
ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.