Deuteronomy 32:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳುದೇವರುಗಳು ತಿಂದುಬಿಟ್ಟವು. ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದುಬಿಟ್ಟವು. ಆ ದೇವರುಗಳೆದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.
Kannada BSI Bible 2016
ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.
Kannada Bible (KNCL) BSI 2016
ಅವರು ಬಲಿಕೊಟ್ಟ ಕೊಬ್ಬು ಮಾಂಸವನು ತಿಂದವರೆಲ್ಲಿ? ಸಮರ್ಪಿಸಿದ ಪಾನಗಳನು ಕುಡಿದ ದೇವತೆಗಳೆಲ್ಲಿ? ಅವರೇ ನಿಮಗೆ ನೆರವಾಗಲಿ, ನಿಮ್ಮನೀಗ ಕಾಯಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ದೇವರುಗಳು ಎಲ್ಲಿ? ಈಗ ಆ ದೇವರುಗಳು ಎದ್ದು ನಿಮಗೆ ಸಹಾಯ ಮಾಡಲಿ, ನಿಮಗೋಸ್ಕರ ಕಾವಲಾಗಲಿ.