Deuteronomy 32:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು. ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ತಲೆಯನ್ನು ಕತ್ತರಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.
Kannada BSI Bible 2016
ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬಾಣಗಳು ರಕ್ತವನ್ನು ಕುಡಿಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚಂಡಾಡುವದು ಎಂಬದೇ.
Kannada Bible (KNCL) BSI 2016
ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”