Deuteronomy 32:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.
Kannada BSI Bible 2016
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ.
Kannada Bible (KNCL) BSI 2016
“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.