Deuteronomy 32:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧರಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.
Kannada BSI Bible 2016
ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವದರಿಂದಲೇ ಬಹುಕಾಲ ಇರುವಿರಿ ಎಂದು ಹೇಳಿದನು.
Kannada Bible (KNCL) BSI 2016
ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.