Deuteronomy 32:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.
Kannada BSI Bible 2016
ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವಿಬ್ಬರೂ ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿ ಇಸ್ರಾಯೇಲ್ಯರ ಮಧ್ಯದಲ್ಲಿ ನನಗೆ ವಿರೋಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆ ಹೋದದರಿಂದ ಹೀಗೆ ಆಗಬೇಕು.
Kannada Bible (KNCL) BSI 2016
ನೀವಿಬ್ಬರೂ ಚಿನ್ ಮರುಭೂಮಿಯಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟು ಬಂದ ಸ್ಥಳದ ಬಳಿಯಲ್ಲಿ, ಇಸ್ರಯೇಲರ ಮಧ್ಯೆ ನನಗೆ ವಿರೋಧವಾಗಿ ದ್ರೋಹಮಾಡಿದಿರಿ; ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದಲೇ ಹೀಗೆ ಆಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ.