Deuteronomy 32:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.
Kannada BSI Bible 2016
ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ನಡೆಯಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು [ಜನಾಂಗವನ್ನಾಗಿ] ಮಾಡಿ ಸ್ಥಾಪಿಸಿದನಲ್ಲವೇ.
Kannada Bible (KNCL) BSI 2016
ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?