Deuteronomy 32:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
Kannada BSI Bible 2016
ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್‌ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇವಿುಸಿಕೊಟ್ಟಾಗ ಇಸ್ರಾಯೇಲ್ಯರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದ್ದೂ;
Kannada Bible (KNCL) BSI 2016
ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.