Deuteronomy 33:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
Kannada BSI Bible 2016
ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
Kannada Bible (KNCL) BSI 2016
ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.