Deuteronomy 33:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.
Kannada BSI Bible 2016
ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರೋಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಶ್ವಾಸಬಿಡದಂತೆ ಮಾಡು.
Kannada Bible (KNCL) BSI 2016
ಸರ್ವೇಶ್ವರಾ, ವೃದ್ಧಿಪಡಿಸು ಇವನ ಆಸ್ತಿಯನು ಸಮರ್ಪಕವಾಗಿರಲಿ ನಿನಗೆ ಇವನ ಸೇವೆಯು ಇವನ ಶತ್ರುಗಳ ನಡುವನ್ನು ಮುರಿ ಮರಲಿ ಏಳದಂತೆ ಮಾಡು ಇವನ ವೈರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಅವನ ಎಲ್ಲ ಕೌಶಲ್ಯಗಳನ್ನು ಆಶೀರ್ವದಿಸಿರಿ. ಅವನ ಕೈಕೆಲಸವನ್ನು ಅಂಗೀಕರಿಸಿರಿ. ಅವನಿಗೆ ವಿರೋಧವಾಗಿ ಏಳುವವರ ನಡು ಮುರಿದು ಹೋಗಲಿ. ಅವನನ್ನು ದ್ವೇಷಿಸುವವರು ತಿರುಗಿ ಏಳದ ಹೋಗಲಿ.”