Deuteronomy 33:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.
Kannada BSI Bible 2016
ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ ಕುಲದವರ ವಿಷಯದಲ್ಲಿ ಹೀಗಂದನು - ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ನಿವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು.
Kannada Bible (KNCL) BSI 2016
ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಬೆನ್ಯಾಮೀನನ ವಿಷಯವಾಗಿ ಹೇಳಿದ್ದೇನೆಂದರೆ: “ಯೆಹೋವ ದೇವರಿಗೆ ಪ್ರಿಯನಾದ ಇವನು ದೇವರ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುವನು. ದೇವರು ಅವನಿಗೆ ದಿನವೆಲ್ಲಾ ಆಸರೆಯಾಗಿರುವರು. ಅವನು ದೇವರ ಭುಜಗಳ ನಡುವೆ ವಿಶ್ರಾಂತಿ ಪಡೆಯುವನು.”