Deuteronomy 33:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನ ಪ್ರಾಂತ್ಯವನ್ನು ಯೆಹೋವನು ಆಶೀರ್ವದಿಸಲಿ: “ಯೆಹೋವನೇ, ಅವರಿಗೆ ಆಕಾಶದಿಂದ ಮಳೆ ಸುರಿಸು, ನೆಲದಿಂದ ಬುಗ್ಗೆಯು ಹೊರಬರಲಿ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
Kannada BSI Bible 2016
ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫ್ ಕುಲಗಳ ವಿಷಯದಲ್ಲಿ ಹೇಳಿದ್ದೇನಂದರೆ - ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
Kannada Bible (KNCL) BSI 2016
ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು: “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನ ವಿಷಯವಾಗಿ ಹೇಳಿದ್ದೇನೆಂದರೆ: “ಅವನ ದೇಶವು ಆಕಾಶದ ಅಮೂಲ್ಯವಾದ ಮಂಜಿನಿಂದಲೂ, ಕೆಳಗೆ ಸಾಗರ ಸೆಲೆಯಿಂದಲೂ ಯೆಹೋವ ದೇವರ ಆಶೀರ್ವಾದ ಹೊಂದಲಿ.