Deuteronomy 33:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.
Kannada BSI Bible 2016
ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ [ಹೋರೇಬ್‍ಬೆಟ್ಟದಲ್ಲಿನ] ಮುಳ್ಳುಗಿಡದಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಕುಲದವರ ಶಿರಸ್ಸಿನ ಮೇಲೆ ಉಂಟಾಗಲಿ.
Kannada Bible (KNCL) BSI 2016
ಸೋದರರಿಗೆ ಸಾಮ್ರಾಟನಾದ ಜೋಸೆಫನ ಪಾಲಿಗೆ ಬರಲಿ ಇವನ ಕುಲದ ಮೇಲೆ ನೆಲಸಲಿ ನೆಲಬೆಳೆಸುವ ಫಲಗಳಲಿ ಶ್ರೇಷ್ಠವಾದುದೆಲ್ಲವು ಮುಳ್ಳುಪೊದೆಯಲಿ ಕಾಣಿಸಿಕೊಂಡಾತನ ದಯೆಯು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ.