Deuteronomy 33:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
Kannada BSI Bible 2016
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
Kannada Bible (KNCL) BSI 2016
ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.