Deuteronomy 33:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
Kannada BSI Bible 2016
ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾದ್ ಕುಲದವರ ವಿಷಯದಲ್ಲಿ ಹೀಗಂದನು - ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು [ಶತ್ರುಗಳ] ಭುಜವನ್ನೂ ಶಿರಸ್ಸನ್ನೂ ಮುರಿಯುತ್ತಾರೆ.
Kannada Bible (KNCL) BSI 2016
ಗಾದ್ ಕುಲ ಕುರಿತು ಮೋಶೆ ನುಡಿದದ್ದು: “ಗಾದ್ಯರ ಪ್ರಾಂತ್ಯವನು ವಿಸ್ತರಿಸಿದ ಸರ್ವೇಶ್ವರನಿಗೆ ಸ್ತೋತ್ರವು! ಸಿಂಹದಂತೆ ಹೊಂಚುಹಾಕಿ ಮುರಿವನು ಗಾದನು ಶತ್ರುಗಳ ಭುಜವನು, ಶಿರವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಗಾದನ ವಿಷಯವಾಗಿ ಹೇಳಿದ್ದೇನೆಂದರೆ: “ಗಾದನ ರಾಜ್ಯವನ್ನು ವಿಸ್ತಾರ ಮಾಡಿದ ದೇವರು ಸ್ತುತಿಹೊಂದಲಿ. ಅವನು ಸಿಂಹದಂತೆ ಜೀವಿಸಿ ತೋಳನ್ನೂ ಶಿರಸ್ಸನ್ನೂ ಮುರಿಯುವನು.