Deuteronomy 33:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;
Kannada BSI Bible 2016
ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;
Kannada Bible (KNCL) BSI 2016
ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.