Deuteronomy 33:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
Kannada BSI Bible 2016
ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್‍ಸಂಭವರು ಸುರಕ್ಷಿತರಾದರು.
Kannada Bible (KNCL) BSI 2016
ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.