Deuteronomy 33:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.
Kannada BSI Bible 2016
ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.
Kannada Bible (KNCL) BSI 2016
ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”