Deuteronomy 33:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.
Kannada BSI Bible 2016
ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.
Kannada Bible (KNCL) BSI 2016
ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ. ಪರಿಶುದ್ಧ ಜನರು ನಿಮ್ಮ ಆಶ್ರಯದಲ್ಲಿಯೇ ಇದ್ದಾರೆ. ನಿಮ್ಮ ಪಾದಗಳಿಗೆ ಎಲ್ಲರೂ ಎರಗುವರು. ನಿಮ್ಮಿಂದಲೇ ಬೋಧನೆ ಪಡೆಯುವರು.