Deuteronomy 33:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.
Kannada BSI Bible 2016
ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ ಕುಲದ ವಿಷಯದಲ್ಲಿ ಹೀಗಂದನು - ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ತಪ್ಪಿಸಬೇಕು.
Kannada Bible (KNCL) BSI 2016
ಯೆಹೂದ ಕುಲ ಕುರಿತು ಮೋಶೆ ಹೇಳಿದ್ದು: “ಸರ್ವೇಶ್ವರಾ, ಯೆಹೂದನ ಮೊರೆಯನ್ನಾಲಿಸು ಬಂಧುಗಳೊಡನೆ ಅವನನ್ನು ಮರಳಿ ಸೇರಿಸು ತನ್ನ ಹಕ್ಕುಬಾಧ್ಯತೆಗಳನ್ನು ಕಾದಿರಿಸಿಕೊಳ್ಳಲು ಶತ್ರುಗಳ ಕೈಯಿಂದ ಅವನನ್ನು ತಪ್ಪಿಸು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: “ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.”