Deuteronomy 34:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡುವುದಕ್ಕಾಗಿ ಯೆಹೋವನು ಮೋಶೆಯನ್ನು ಕಳುಹಿಸಿದನು. ಅದನ್ನು ಫರೋಹನೂ ಅವನ ಪರಿವಾರದವರೂ ಅಧಿಕಾರಿಗಳೆಲ್ಲರೂ ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.
Kannada BSI Bible 2016
ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಐಗುಪ್ತ ದೇಶದಲ್ಲಿ ಫರೋಹನ ಮುಂದೆಯೂ ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಯೆಹೋವನು ಅವನನ್ನು ಕಳುಹಿಸಿದನು;
Kannada Bible (KNCL) BSI 2016
ಈಜಿಪ್ಟ್ ದೇಶದಲ್ಲಿ ಫರೋಹನ ಮುಂದೆ ಹಾಗು ಅವನ ಪ್ರಜಾಪರಿವಾರದವರ ಮುಂದೆ ಅವನು ವಿಧವಿಧವಾದ ಪವಾಡಗಳನ್ನೂ ಮಹತ್ಕಾರ್ಯಗಳನ್ನೂ ನಡೆಸಿದನು; ಸರ್ವೇಶ್ವರ ಅವನನ್ನು ಅದಕ್ಕಾಗಿಯೇ ಕಳುಹಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನಲ್ಲಿ ಫರೋಹನ ಮುಂದೆಯೂ, ಅವನ ಎಲ್ಲಾ ಅಧಿಕಾರಿಗಳ ಮುಂದೆಯೂ, ಜನರ ಮುಂದೆಯೂ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ಮಾಡುವುದಕ್ಕೆ ಯೆಹೋವ ದೇವರು ಮೋಶೆಯನ್ನು ಕಳುಹಿಸಿದ್ದರು.