Deuteronomy 34:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.
Kannada BSI Bible 2016
ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.
Kannada Bible (KNCL) BSI 2016
ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.