Deuteronomy 34:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಯನ್ನು ಮೋವಾಬ್‌ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.
Kannada BSI Bible 2016
ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ [ಯೆಹೋವನು] ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನವರೆಗೆ ಯಾರಿಗೂ ತಿಳಿಯದು.
Kannada Bible (KNCL) BSI 2016
ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಅವನ ದೇಹವನ್ನು ಸಮಾಧಿಮಾಡಿದರು. ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ತಿಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವನನ್ನು ಮೋವಾಬಿನ ದೇಶದ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೂಣಿಟ್ಟರು. ಆದರೆ ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ಗೊತ್ತಿಲ್ಲ.