Deuteronomy 34:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.
Kannada BSI Bible 2016
ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟದರಿಂದ ಅವನು ಜ್ಞಾನವರ ಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲ್ಯರು ಯೆಹೋಶುವನ ಮಾತಿನ ಪ್ರಕಾರ ನಡೆದರು.
Kannada Bible (KNCL) BSI 2016
ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.