Deuteronomy 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.
Kannada BSI Bible 2016
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.
Kannada Bible (KNCL) BSI 2016
“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.