Deuteronomy 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬೆಂಕಿಯೊಳಗಿಂದ ಯೆಹೋವನು ಮಾತನಾಡಿದನು. ಅದು ಯಾರೋ ಮಾತಾಡಿದಂತಿತ್ತು, ಆದರೆ ನೀವು ಯಾರನ್ನೂ ಕಾಣಲಿಲ್ಲ. ನೀವು ಸ್ವರವನ್ನು ಮಾತ್ರ ಕೇಳಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.
Kannada BSI Bible 2016
ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದ್ದೂ; ಮಾತಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸದೆ ಹೋದದ್ದೂ;
Kannada Bible (KNCL) BSI 2016
ಆ ಅಗ್ನಿಜ್ವಾಲೆಯಿಂದ ಸರ್ವೇಶ್ವರ ನಿಮ್ಮ ಸಂಗಡ ಮಾತಾಡಿದರು. ಆ ವಾಣಿಯ ಶಬ್ದವನ್ನು ನೀವು ಕೇಳಿದಿರಿ. ಆಕಾರ ಯಾವುದೂ ಕಾಣಿಸಲಿಲ್ಲ, ಸ್ವರ ಮಾತ್ರ ಕೇಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಂಕಿಯ ಮಧ್ಯದೊಳಗಿಂದ ಯೆಹೋವ ದೇವರು ನಿಮ್ಮ ಸಂಗಡ ಮಾತಾಡಿದರು. ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ, ಆದರೆ ಆಕಾರವನ್ನು ನೋಡಲಿಲ್ಲ, ಧ್ವನಿಯನ್ನು ಮಾತ್ರ ಕೇಳಿದಿರಿ.