Deuteronomy 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.
Kannada BSI Bible 2016
ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;
Kannada Bible (KNCL) BSI 2016
ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.