Deuteronomy 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ಸಮಯದಲ್ಲಿ ದೇವರಾದ ಯೆಹೋವನು ನನಗೆ ಇತರ ವಿಧಿನಿಯಮಗಳನ್ನು ತಿಳಿಸಿ ನೀವು ವಾಗ್ದಾನ ಮಾಡಿದ ದೇಶದೊಳಗೆ ನೆಲೆಸಿದಾಗ ಆ ವಿಧಿನಿಯಮಗಳನ್ನು ಅನುಸರಿಸಲು ನಿಮಗೆ ತಿಳಿಸಲು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.
Kannada BSI Bible 2016
ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೊಳೆ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದೂ; ಇವುಗಳನ್ನೆಲ್ಲಾ ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.
Kannada Bible (KNCL) BSI 2016
ನೀವು ನದಿದಾಟಿ ಸ್ವಾಧೀನಮಾಡಿಕೊಳ್ಳುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಅಂದೇ ನನಗೆ ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದಾಟಿ ಹೋಗಿ, ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನ್ಯಾಯನಿಯಮಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಯೆಹೋವ ದೇವರು ನನಗೆ ಆಜ್ಞಾಪಿಸಿದರು.