Deuteronomy 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
Kannada BSI Bible 2016
ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.
Kannada Bible (KNCL) BSI 2016
ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.