Deuteronomy 4:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,
Kannada BSI Bible 2016
ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ
Kannada Bible (KNCL) BSI 2016
“ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು.