Deuteronomy 4:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
Kannada BSI Bible 2016
ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ ಕೇಳಲಾರದೆ ತಿನ್ನಲಾರದೆ ವಾಸನೆ ತಿಳುಕೊಳ್ಳಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
Kannada Bible (KNCL) BSI 2016
ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.