Deuteronomy 4:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
Kannada BSI Bible 2016
ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
Kannada Bible (KNCL) BSI 2016
“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.